ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಆರೋಪಿಗಳಾದ ಪುತ್ತೂರು ಕುರಿಯ ಗ್ರಾಮದ ನಿವಾಸಿ ಸುಜಿತ್ (36) ಹಾಗೂ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ ಪುಟ್ಟಣ್ಣ (32) ಎಂಬವರುಗಳ ವಿರುದ್ದ ದಿನಾಂಕ:-09.04.2025 ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ ನಂ: 42/2025 ಕಲಂ : 25(1B)(B) Arms Act 1959 & ಕಲಂ 270,3(5) ಬಿಎನ್‌ಎಸ್ 2023 ರಂತೆ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ತನಿಖೆ ನಡೆಸಲಾಗಿ ಆರೋಪಿಗಳನ್ನು ದಿನಾಂಕ:-09.04.2025 ರಂದು ದಸ್ತಗಿರಿ ಮಾಡಿ ವಿಚಾರಣೆ ನಡೆಸಲಾಗುತ್ತಿದೆ.