ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯ ಮಧ್ಯೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.
ಪಂಜಾಬ್ ಕಿಂಗ್ಸ್ ತಂಡ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ 9 ಗಂಟೆ 29 ನಿಮಿಷಕ್ಕೆ ಮೈದಾನದ ದೀಪಗಳನ್ನು ಆಫ್ ಮಾಡಲಾಗಿದೆ. ಹೀಗಾಗಿ ಮೈದಾನದಲ್ಲಿದ್ದ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದರೆ, ಇತ್ತ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ಪ್ರೇಕ್ಷಕರು ಮೈದಾನದಿಂದ ನಿರ್ಗಮಿಸುತ್ತಿದ್ದಾರೆ.