ಮಂಗಳೂರು: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಕರ್ನಾಟಕ ಬಿಜೆಪಿ ವತಿಯುಂದ 25 ಲಕ್ಷ ರೂಪಾಯಿ ಠೇವಣಿ ಪತ್ರವನ್ನು ಇಂದು ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ಮತ್ತು ತಾಯಿ ಸುಲೋಚನಾ ಶೆಟ್ಟಿಗೆ ಹಸ್ತಾಂತರಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಸಂಸದ ಕ್ಯಾ. ಬ್ರಿಜೇಶ್ ಚೌಟ,ಶಾಸಕರಾದ ಹರೀಶ್ ಪೂಂಜಾ,ರಾಜೇಶ್ ನಾಯ್ಕ, ಉಮಾನಾಥ ಕೋಟ್ಯಾನ್,ಭರತ್ ಶೆಟ್ಟಿ,ವೇದವ್ಯಾಸ ಕಾಮತ್ ,ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.
ಹತ್ಯೆಯಾದ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ 25 ಲಕ್ಷ ನೀಡುವ ಬಗ್ಗೆ ಆಶ್ವಾಸನೆ ನೀಡಿದ್ದರು.