ಧರ್ಮಸ್ಥಳ : ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋ ರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ 5.30 ಗಂಟೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊOಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ದೂರದಲ್ಲಿ ಅಡಗಿ ನಿಂತರು.
ಈ ವೇಳೆ ಗುಂಪಿನಲ್ಲಿದ್ದ ದೊಡ್ಡ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದ್ದು ಇದನ್ನು ಕಂಡ ದಿನೇಶ್ ಗಾಬರಿಗೊಂಡು ಸ್ಥಳದಲ್ಲಿಯೇ ಮೋರ್ಛೆ ಹೋಗಿದ್ದರು. ರಿಕ್ಷಾವನ್ನು ಹುಡಿ ಮಾಡುತ್ತಿರುವ ಶಬ್ಧ ದಿನೇಶ್ ರವರ ಪತ್ನಿ ಹಾಗೂ ನೆರೆಯವರಿಗೆ ಕೇಳಿ ಸ್ಥಳಕ್ಕೆ ಬಂದು ದಿನೇಶ್ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಉಪಚರಿಸಿದ ಬಗ್ಗೆ ವರದಿಯಾಗಿದೆ.ಕಲ್ಲೇರಿ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು.



























