ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಸೋಮೇಶ್ವರ ಕಡಲ ತೀರದಲ್ಲಿ ‘ಯೋಗ ವಿತ್ ಯೋಧ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಸೋಮೇಶ್ವರ ಬೀಚ್‌ನ ಕಡಲ ಕಿನಾರೆಯಲ್ಲಿ ಜೂ. 21ರಂದು ಸಂಜೆ 3 ಗಂಟೆಗೆ ನಡೆಯಲಿರುವ ‘ಯೋಗ ವಿತ್ ಯೋಧ’ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಹ್ವಾನ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2014ರಲ್ಲಿ ಪ್ರಸ್ತಾವನೆ ಮಾಡಿದ ನಂತರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಜೂ.21 ಅನ್ನು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಿತ್ತು.
ಅದರಂತೆ ಈ ಬಾರಿಯ ಆಚರಿಸಲಾಗುತ್ತಿರುವ 11ನೇ ವಿಶ್ವ ಯೋಗ ದಿನದ ಥೀಮ್ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಆಗಿದ್ದು, ನಮ್ಮ ಆರೋಗ್ಯ ಮತ್ತು ಸರ್ವತೋಮುಖ ಬೆಳವಣಿಗೆಗೆ ಯೋಗ ಉತ್ತಮ ಅಭ್ಯಾಸ.
ಅದರಂತೆ ದಕ್ಷಿಣ ಕನ್ನಡದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ‘ಯೋಗ ವಿತ್ ಯೋಧ’ ಕಾರ್ಯಕ್ರಮವನ್ನು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಆಯೋಜಿಸಲಾಗುತ್ತಿದೆ ಎಂದರು