ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗಾಗಿ ನ. 28ರಂದು ಪುತ್ತೂರಿನ ಕೊಟೇಚಾ ಹಾಲಿನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಮುಜರಾಯಿ ಮತ್ತು ಮೀನುಗಾರಿಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಉಪಾಧ್ಯಕ್ಷರು ಮತ್ತು ಸಂಸದರಾದ ಶೋಭಾ ಕರಂದ್ಲಾಜೆ, ಎಸ್ ಮುನಿಸ್ವಾಮಿ, ರಾಜ್ಯ ಉಪಾಧ್ಯಕ್ಷ ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಜತೆಗೆ ಆಯಾ ಜಿಲ್ಲೆಯ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ.