ವಿಟ್ಲ: ಚಾಲಕನ ನಿಯಂತ್ರಣ ಕಳೆದು ಕಾರೊಂದು ಚರಂಡಿಗೆ ಉರುಳಿ ಬಿದ್ದ ಘಟನೆ ವಿಟ್ಲ- ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿ ಭಾನುವಾರ ಸಂಭವಿಸಿದೆ.
ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಬದನಾಜೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.