ಪುತ್ತೂರು: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಮನದಲ್ಲಿಟ್ಟುಕೊಂಡು, ಜುಲೈ 17, 2025 ರಂದು ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ತಾಲೂಕು ತಹಶೀಲ್ದಾರರ ಕಾರ್ಯಾಲಯದಿಂದ ಜಾರಿಗೊಂಡಿರುವ ಪ್ರಕಟಣೆಯ ಪ್ರಕಾರ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ. ಈ ನಿರ್ಧಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ತೆಗೆದುಕೊಳ್ಳಲಾಗಿದೆ.