ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿದ್ದೆ ಎಂದು ದೂರು ನೀಡಲಾದ ಪ್ರಕರಣದಲ್ಲಿ ಎಸ್‌ಐಟಿ ತನಿಖಾಧಿಕಾರಿಗಳು ಸ್ಥಳ ಮಹಜರು ಕಾರ್ಯ ಶುರು ಮಾಡಿದ್ದಾರೆ.
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ತೆಂಗಿನ ತೋಟದ ಪೊದೆಗಳಲ್ಲಿ ಮಹಜರು ಕಾರ್ಯವನ್ನು ತನಿಖಾಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ. ಸಾಕ್ಷಿ ದೂರುದಾರನನ್ನು ಪೊಲೀಸರು ಬೆಳ್ತಂಗಡಿ ಎಸ್‌ಐಟಿ ಕಚೇರಿಯಿಂದ ಸ್ಥಳಕ್ಕೆ ಕೊಂಡೊಯ್ದು ಈ ಕೆಲಸ ಆರಂಭಿಸಿದ್ದಾರೆ.