ಬೆಂಗಳೂರು: ಸಾರಿಗೆ ನೌಕರರ ಜೊತೆಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ವಿಫಲಗೊಂಡ ಬೆನ್ನಲ್ಲೇ ಮುಷ್ಕರಕ್ಕೆ ಕರೆ ಕೊಡಲಾಗಿತ್ತು. ಆದ್ರೆ ಇದೀಗ ಮುಷ್ಕರ ಮುಂದೂಡಿಕೆ ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ನಾಳೆ ಸಾರಿಗೆ ಮುಷ್ಕರ ಮುಂದೂಡಿಕೆ ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದೆ. ನಾಳಿನ ಸಾರಿಗೆ ನೌಕರರ ಪ್ರತಿಭಟನೆ ಪ್ರಶ್ನಿಸಿ ವಕೀಲ ಎನ್ ಪಿ ಅಮೃತೇಶ್ ಮತ್ತಿತರರಿಂದ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಿಸಿದ ಹೈಕೋರ್ಟ್, ಒಂದು ದಿನದ ಮಟ್ಟಿಗೆ ಮುಷ್ಕರವನ್ನ ಮುಂದೂಡುವಂತೆ ಸೂಚನೆ ನೀಡಿದೆ.
ಹೀಗಾಗಿ ನಾಳೆ ಬಹುತೇಕ ಸರ್ಕಾರಿ ಬಸ್ಗಳು ಎಂದಿನಂತೆ ಓಡಾಟ ನಡೆಸಲಿವೆ. ನಾಳೆ ಒಂದು ದಿನ ನೌಕರರು ಮುಷ್ಕರದಲ್ಲಿ ಭಾಗಿಯಾಗಲ್ಲ. ಕೋರ್ಟ್ ನಿರ್ದೇಶನ ಹಿನ್ನೆಲೆ ನಾಳೆ ಮುಷ್ಕರ ಇರುವುದಿಲ್ಲ ಎಂದು ಬಂದ್ಗೆ ಕರೆ ಕೊಟ್ಟ ಜಂಟಿ ಕ್ರಿಯಾ ಸಮಿತಿ ಮಾಹಿತಿ ನೀಡಿದೆ.