ಬಂಟ್ವಾಳ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ ಹೊಡೆದು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂ ಮುಂಭಾಗ ನಡೆದಿದೆ.
ಘಟನೆ ಪರಿಣಾಮ ಬೈಕ್ ಸವಾರ ಕುದ್ರೆಬೆಟ್ಟು ನಿವಾಸಿ ಸುಶಾಂತ್ ಪೂಜಾರಿ ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.