ನಟ ದರ್ಶನ್ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.
‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದ ಸುಪ್ರೀಂಕೋರ್ಟ್ ಹೇಳಿದೆ.
ಕಳೆದ ವರ್ಷ ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಡಿಸೆಂಬರ್ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಬಳಿ ಪ್ರಶ್ನೆ ಮಾಡಿತ್ತು.
ಹಲವು ದಿನಗಳ ಕಾಲ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತ್ತು. ಅಲ್ಲದೆ, ಕರ್ನಾಟಕ ಹೈಕೋರ್ಟ್ ಜಾಮೀನು ಕೊಡಲು ನೀಡಿದ ಕಾರಣಗಳ ಬಗ್ಗೆ ಬೇಸರ ಹೊರಹಾಕಿತ್ತು. ಈಗ ಸುಪ್ರೀಂ ತೀರ್ಪು ನೀಡಿದೆ.
ದರ್ಶನ್ ಅವರು ಇಷ್ಟು ದಿನ ಹೊರಗೆ ಹಾಯಾಗಿ ಓಡಾಡಿಕೊಂಡಿದ್ದರು. ಆದರೆ, ಈಗ ಅವರಿಗೆ ತೊಂದರೆ ಎದುರಾಗಿದೆ. ಅವರು ಮತ್ತೆ ಜೈಲು ಸೇರು ಬೇಕಿದೆ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.