ವಿಟ್ಲ: ಪುಣಚ ಗ್ರಾಮದ ಅಜ್ಜಿನಡ್ಕ ಕೊಡಂಗೆ ನಿವಾಸಿ ತಿಮ್ಮಪ್ಪ ಪೂಜಾರಿ ( 70) ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.
ಸಹೋದರ ನಾರಾಯಣ ಪೂಜಾರಿಯವರ ಮನೆಯಲ್ಲಿ ವಾಸಿಸುತ್ತಿದ್ದ ಅವರು, ಬುಧವಾರ ಬೆಳಿಗ್ಗೆ ಮನೆಯಿಂದ ಹೊರಟು ಹೋಗಿದ್ದು, ಕೆಲ ಹೊತ್ತು ಕಳೆದರೂ ಮನೆಗೆ ಹಿಂದಿರುಗಿ ಬಂದಿರಲಿಲ್ಲ.
ನೆರೆಮನೆಯವರೊಬ್ಬರು ಪಕ್ಕದ ಮನೆಯವರ ಬಾವಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿ ಸುದ್ದಿ ತಿಳಿಸಿದ್ದು, ಮೃತಪಟ್ಟವರ ಗುರುತು ಪತ್ತೆ ಹಚ್ಚಲಾಯಿತು.
ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.