ಪುತ್ತೂರು:ಶ್ರೀ ಧರ್ಮಸ್ಥಳ ಧರ್ಮ ಸಂರಕ್ಷಣಾ ವೇದಿಕೆ ಪುತ್ತೂರು ಇದರ ವತಿಯಿಂದ ಸೆ.೧ರಂದು ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆಯಲಿರುವ ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನ ಖಂಡನೆ ಜನಾಗ್ರಹ ಸಭೆಯ ಆಮಂತ್ರಣ ಪತ್ರಿಕೆಯು ಆ.೨೬ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾ ಕಚೇರಿಯಲ್ಲಿ ಬಿಡುಗಡೆಗೊಂಡಿತು.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ರೋಟರಿ ಕ್ಲಬ್ ಪುತ್ತೂರು ಬಿರುಮಲೆ ಹಿಲ್ಸ್‌ನ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ವಳತ್ತಡ್ಕ, ಸತೀಶ್ ನಾಕ್, ಭಜನಾ ಪರಿಷತ್‌ನ ಮಾಜಿ ಅಧ್ಯಕ್ಷ ಸುಬ್ಬಯ್ಯ ರೈ, ಭಜನಾ ಸಂಯೋಜಕರಾದ ರಮೇಶ್ ಬಳ್ಳ, ಸುಧಾಕರ ಕುಲಾಲ್ ನಡುವಾಲ್, ವೆಂಕಟಕೃಷ್ಣ ಪಾಲೆಚ್ಚಾರು, ಜನಜಾಗೃತಿ ವೇದಿಕೆ ತಾಲೂಕು ಯು.ಲೋಕೇಶ್ ಹೆಗ್ಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ, ತಾಲೂಕು ಯೋಜನಾಧಿಕಾರಿ ಶಶಿಧರ ಎಂ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.