ಪುತ್ತೂರು: ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅನ್ಯಕೋಮಿನ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಮುರ ನಿವಾಸಿ ಸಫ್ಘಾನ್ ಯಾನೆ ಅಫ್ಘಾನ್ ಆರೋಪಿಯಾಗಿದ್ದು, ಆರೋಪಿಯು ಅಪ್ರಾಪ್ತಯನ್ನು ಪುಸಲಾಯಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಲಾಗಿದೆ. ಘಟನೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ಮತ್ತು ದಲಿತ ದೌರ್ಜನ್ಯ ಪ್ರಕರಣವೂ ದಾಖಲಾಗಿದೆ ಎಂದು ತಿಳಿದು ಬಂದಿದೆ.