ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ಸುಭದ್ರಾ ಕಲಾ ಮಂದಿರ-ಮುಕ್ರಂಪಾಡಿ, ಪುತ್ತೂರಿನಲ್ಲಿ ನಡೆಯಿತು.
ಸಭೆಯಲ್ಲಿ ಮಾಂಗಲ್ಯಂ ತಂತುನಾನೇನ ಸಾಮೂಹಿಕ ವಿವಾಹ ಕಾರ್ಯಕ್ರಮ ಅಧ್ಯಕ್ಷರಾಗಿ ಖ್ಯಾತ ವಕೀಲರಾದ ಶ್ರೀ ನರಸಿಂಹ ಪ್ರಸಾದ್, ಕಾರ್ಯಾಧ್ಯಕ್ಷರಾಗಿ ಉದ್ಯಮಿಗಳಾದ ಶ್ರೀ ಪ್ರಾಣೇಶ್ ಕೆಮ್ಮಾಯಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೋಶಾಧಿಕಾರಿಯಾಗಿ ಶ್ರೀ ಉದಯ್ ಕುಮಾರ್ ರೈ ಸಂಪ್ಯ ಅವರನ್ನು ಆಯ್ಕೆ ಮಾಡಲಾಯಿತು.