ಮಂಗಳೂರು: ಕೂಳೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಧವಿ ಎಂಬ ಮಹಿಳೆ ದುರ್ಮರಣಕ್ಕೀಡಾಗಿದ್ದಾರೆ.
ಅವರು ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಯ ಗುಂಡಿಗೆ ಬಿದ್ದಿದ್ದರು.
ಅದೇ ವೇಳೆ ಹಿಂದಿನಿಂದ ಬಂದ ಮೀನಿನ ಟ್ರಕ್ ಅವರ ಮೇಲೆ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವಿಗೀಡಾದರು.
ಈ ದಾರುಣ ಘಟನೆ ಸ್ಥಳೀಯರಲ್ಲಿ ಆಕ್ರೋಶವನ್ನುಂಟುಮಾಡಿದ್ದು, ಅವರು ಮೂಲ್ಕಿಯಿಂದ ಪಂಪ್‌ವೆಲ್‌ಗೆ ಸಾಗುವ ಹೆದ್ದಾರಿಯ ದುಸ್ಥಿತಿಯ ಬಗ್ಗೆ ಗಂಭೀರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಮಾರ್ಗದಲ್ಲಿ ಹಲವಾರು ದೊಡ್ಡ ಗುಂಡಿಗಳು ಇರುವುದರಿಂದ ದಿನಕ್ಕೊಂದು ಅಪಘಾತ ಸಂಭವಿಸುವಂತಹ ಪರಿಸ್ಥಿತಿಯಿದೆ ಎಂದು ಸ್ಥಳೀಯರು ದೂರಿದ್ದಾರೆ.