ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರಾನಾಥ್ (49)ಆರೋಗ್ಯದಲ್ಲಿ ಏರುಪೇರಾಗಿ ನಿಧನ ಹೊಂದಿದ ಘಟನೆ ನಡೆದಿದೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಮತ್ತು ಎರಡು ಮಕ್ಕಳನ್ನು ಅಗಲಿದ್ದಾರೆ.