ಜನಪ್ರಿಯ ರಿಯಾಲಿಟಿ ಶೋ ಸರಿಗಮಪದ ಮೂಲಕ ಜನಪ್ರಿಯರಾಗಿದ್ದ ಸಾಗರದ ಗಾಯಕಿ ಸುಹಾನಾ ಸೈಯ್ಯದ್ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಇಬ್ಬರ ಧರ್ಮ ಬೇರೆ ಬೇರೆಯಾಗಿದ್ದರೂ ಧೈರ್ಯವಾಗಿ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿಜಾಬ್ ಧರಿಸಿ ಹಿಂದೂ ಭಜನೆಯನ್ನು ಸುಹಾನ ಹಾಡುವಾಗ ತೀವ್ರ ವಿರೋಧ ವ್ಯಕ್ತವಾಗಿತ್ತು.
ಇನ್ನು ಈ ಸಂದರ್ಭ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಪೊಲೀಸರ ಸರ್ಪಗಾವಲಿನಲ್ಲಿ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು.