ಪುತ್ತೂರು: ಅ.20 ರ ಸೋಮವಾರದಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ ಕೆಲವು ಮಂದಿ ಅಸ್ವಸ್ಥಗೊಂಡಿದ್ದು ಈ ಘಟನೆಗೆ ನಾನು ಸಾರ್ವಜನಿಕರಲ್ಲಿ ಕ್ಷಮೆ ಯಾಚಿಸುವುದಾಗಿ ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರಿದ ಕಾರಣ ಮತ್ತು ಮಧ್ಯಾಹ್ನದ ವೇಳೆ ಗಾಳಿ ಮಳೆ ಬಂದ ಕಾರಣ ಜನರ ನಡುವೆ ಸಿಲುಕಿ ಏಳೆಂಟು ಮಂದಿ ಅಸ್ವಸ್ಥರಾಗಿದ್ದರು.
ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಸಾಕಷ್ಟು ಪ್ರಮಾಣದಲ್ಲಿ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಿದ್ದರೂ ಜನಸಂದಣಿ ಹೆಚ್ಚಾದ ಕಾರಣ ಸ್ವಲ್ಪ ವೆತ್ಯಾಸ ಉಂಟಾಗಿದೆ. ಈ ವೇಳೆ ಕೆಲವರ ಮನಸ್ಸಿಗೆ ನೋವಾಗಿದೆ, ಬೇಸರವಾಗಿದೆ ಇದಕ್ಕೆ ನಾನು ಕ್ಷಮೆ ಯಾಚಿಸುತ್ತೇನೆ.
ಕಾರ್ಯಕ್ರಮಕ್ಕೆ ಬಂದವರಲ್ಲಿ ಯಾರ ಮನಸ್ಸಿಗೂ ನೋವಾಗಿದ್ದಲ್ಲಿ ಕ್ಷಮೆ ಕೇಳುತ್ತೇನೆ. ಸಂಜೆ ಬಳಿಕ ರಾತ್ರಿ 9.30 ರವರೆಗೂ ಉಡುಗೋರೆ ವಿತರಣೆ ನಡೆದಿದೆ. ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಆಗಿರುವ ಘಟನೆಗೆ ವಿಷಾದವನ್ನು ವ್ಯಕ್ತೊಡಿಸುವೆ ಎಂದು ಅಶೋಕ್ ರೈ ಹೇಳಿದ್ದಾರೆ.