ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲ ಇಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ದೀಪಾವಳಿ ಗೋಪೂಜೆ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.
ಕಲೆಯ ಮೇಲೆ ಅತೀವ ಆಸಕ್ತಿಯನ್ನು ಹೊಂದಿರುವ ದ್ವಾರಕಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ಈ ಬಾರಿಯ ದೀಪಾವಳಿ ಗೋಪೂಜೆಯ ಸಂದರ್ಭದಲ್ಲಿ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಕಲಾದೀಪ ವಿದ್ವಾನ್ ದೀಪಕ್ ಕುಮಾರ್ ಅವರ ನಿರ್ದೇಶನದಲ್ಲಿ ಸುರಭಿ ಕಲಾವಲ್ಲರೀ ಎಂಬ ಶಾಸ್ತ್ರೀಯ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಶ್ರೀಮತಿ ಲಕ್ಷ್ಮೀ ಅಮ್ಮನವರು ದೀಪೋಜ್ವನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಆರಂಬಿಸಿದರು, ದ್ವಾರಕ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ರವರು ಸ್ವಾಗತಿಸಿದರು. ದ್ವಾರಕ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶ್ರೀ ಗಣರಾಜ್ ಕುಂಬ್ಳೆ ಇವರು ಧನ್ಯವಾದ ಸಮರ್ಪಿಸಿದರು ಮತ್ತು ಸಂಸ್ಥೆಯ ಸಿಬ್ಬಂದಿಯಾದ ಶ್ರೀ ದುರ್ಗಾ ಗಣೇಶ್ ಕೆ ವಿ ಇವರು ಕಾರ್ಯಕ್ರಮ ನಿರೂಪಿಸಿದರು ಹಾಗೂ ಸುಮಾರು 1 ಗಂಟೆ 30 ನಿಮಿಷಗಳ ಕಾಲ ವಿದ್ವಾನ್ ದೀಪಕ್ ಕುಮಾರ್ ರವರ ಶಿಷ್ಯ ವೃಂದದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು, ಈ ಸಂದರ್ಭದಲ್ಲಿ ದ್ವಾರಕ ಸಮೂಹ ಸಂಸ್ಥೆಗಳ ಸಿಬ್ಬಂದಿಗಳು ಹಾಗೂ ಹಿತೈಷಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.