ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 72/2025, ಕಲಂ: 5, 12 ಕರ್ನಾಟಕ ಗೋ ಹತ್ಯೆ ನಿಷೇಧಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ: 11 (1) (ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆ ಯಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖೆ ನಡೆಸಿ, ದಿನಾಂಕ ಪ್ರಕರಣದ ಆರೋಪಿ ಇಬ್ರಾಹಿಂ ಖಲೀಲ @ತೌಸಿಫ್ ಎಂಬಾತನು ಅಕ್ರಮವಾಗಿ ಜಾನುವಾರುಗಳನ್ನು ಮಾಂಸ ಮಾಡಲು ಉದ್ದೇಶಿಸಿದ ಸಜೀಪನಡು ಗ್ರಾಮದ ತಂಚಿಬೆಟ್ಟು ಎಂಬಲ್ಲಿನ ಮನೆಯನ್ನು ಹಾಗೂ ಪ್ರಕರಣದ ಇನ್ನೊಬ್ಬ ಆರೋಪಿ ಮಹಮ್ಮದ್ ಸಿನಾನ್ ಎಂಬಾತನು ಸಜಿಪಪಡು ಗ್ರಾಮದ ಕೋಟೆಕಣಿ ಎಂಬಲ್ಲಿ ಮಾಂಸ ಇಡಲು ಉದ್ದೇಶಿಸಿದ ಕೋಣೆ ಜಪ್ತಿ ಮಾಡಲಾಗಿರುತ್ತದೆ.
























