ಕಡಬ: ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೆ ತರಗತಿಯಲ್ಲಿ ಓದುತ್ತಿದ್ದ ಬಾಲಕ ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ.
ಸಂಜೆ ಮನೆಗೆ ಬ೦ದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.
ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.



























