ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕೆಲಸಕ್ಕೆಂದು ಮನೆಯಿಂದ ತೆರಳಿ ಬಳಿಕ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಜಪ್ಪು ಸೂಟರ್ ಪೇಟೆಯ ಕುಮಾರ್ ಎಂಬವರ ಪತ್ನಿ ಸುಮಾ ಎನ್.(24) ನಾಪತ್ತೆಯಾದವರು.
ಸೋಮವಾರ ಬೆಳಗ್ಗೆ ಮನೆಯಿಂದ ತೆರಳಿದ್ದ ಆಕೆ ಕೆಲಸಕ್ಕೆ ಹಾಜರಾಗಿಲ್ಲ. ಪತಿ ಕುಮಾರ್ ಅವರು ಆಕೆಯ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದಾಗಲೂ ಯಾವುದೇ ಮಾಹಿತಿ ಲಭಿಸಿಲ್ಲ. ಈ ಬಗ್ಗೆ ಕುಮಾರ್ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕಪ್ಪು ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಉದ್ದ ತೋಳಿನ ಅಂಗಿ ಧರಿಸಿದ್ದ ಅವರು ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.




























