ಬಂಟ್ವಾಳ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19 ರಂದು ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಎಂದು ಗುರುತಿಸಲಾಗಿದೆ.
ಸ್ಕೂಟರ್‌ನ ಇನ್ನೋರ್ವ ಸವಾರೆ, ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಪ್ರಣಮ್ಯ ಸ್ಟುಡಿಯೋ ಮಾಲಕರ ಪುತ್ರಿ ಪೃಥ್ವಿ ರಾವ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇಬ್ಬರೂ ಮಂಗಳೂರು ಕಾಲೇಜಿನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿಯರೆಂದು ತಿಳಿದು ಬಂದಿದೆ.
ಇಬ್ಬರೂ ಬೆಳ್ತಂಗಡಿಯಿಂದ ಕಾಲೇಜಿಗೆ ಹೋಗುವ ವೇಳೆ ಈ ತಿರುವಿನಲ್ಲಿ ವ್ಯಾಗನಾರ್ ಕಾರು ಮತ್ತು ಹೊಂಡಾ ಆಕ್ಟಿವ್ ಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
























