ಪುತ್ತೂರು: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಡಿ.3ರಂದು ಸಂಜೆ ನಡೆದಿದೆ.
ಅಪಘಾತದಿಂದ ಕಾರು ಚಾಲಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ, ಕಬಕ ನಿವಾಸಿ ಸತೀಶ್ ರಾವ್, ಅವರ ಪತ್ನಿ ವೇದವಳ್ಳಿ, ಅದರ ಮೊಮ್ಮಗ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ 3ನೇ ತರಗತಿಯ ವಿದ್ಯಾರ್ಥಿ ಹಾಗೂ ಪಡುಮಲೆ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಉದಯ ಕುಮಾರ್ ಪಡುಮಲೆ ಗಾಯಗೊಂಡಿದ್ದು ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕಾರ್ಯಕ್ರಮವೊಂದಕ್ಕೆ ಮಂಗಳೂರಿಗೆ ತೆರಳಿದ್ದ ಅವರು ಪುತ್ತೂರಿಗೆ ಹಿಂತಿರುಗಿ ಬರುತ್ತಿದ್ದ ವೇಳೆ ಮೆಲ್ಕಾರ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು ಅವರನ್ನು ಬಿ.ಸಿ ರೋಡ್ ಸೋಮಯಾಜಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮಾನವೀಯತೆ ಮೆರೆದ ಕೃಷ್ಣ ಪ್ರಸಾದ್ ಆಳ್ವ :ಕೊಣಾಜೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದೇ ಮಾರ್ಗದಲ್ಲಿ ವಾಪಸಾಗುತ್ತಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಅವರು ಗಾಯಾಳುಗಳನ್ನು ಉಪಚರಿಸಿ ತನ್ನ ಇನ್ನೋವಾ ಕಾರಿನಲ್ಲಿಯೇ ಬಿ.ಸಿ.ರೋಡ್ ನ ಸೋಮಯಾಜಿ ಆಸತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿ, ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ತೀವ್ರ ಗಾಯಗಳಾಗಿರುವ ಹಿನ್ನೆಲೆಯಲ್ಲಿ ನಾಲ್ವರು ಗಾಯಾಳುಗಳನ್ನು ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರೂನ್ ಸಿಕ್ವೇರಾ , ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ರೈ, ಬಾಬು ಮರಿಕೆ ಮತ್ತು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಬಾತೀಶ್ ಸಲ್ಮಾರ ಸಹಕರಿಸಿದ್ದರು.




























