ವಿಟ್ಲ: ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಮಾಣಿಲ ರಸ್ತೆಯ ಮುಳಿಯ ಎಂಬಲ್ಲಿ ನಡೆದಿದೆ.
ಘಟನೆ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಮೈರ ಮೂಲದ ಮೋನಪ್ಪ ಕುಲಾಲ್, ಲಲಿತಾ ಕುಲಾಲ್, ರಮಣಿ ಕುಲಾಲ್ ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

























