ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದ ರಾಜಕೀಯಪ್ರೇರಿತವಾಗಿ ಭಗವಾಧ್ವಜದ ಕಟ್ಟೆಯ ತೆರವು ಕಾರ್ಯ ನಡೆದಿದ್ದು ಈ ಬೆಳವಣಿಗೆ ಅಧಿಕಾರಿಗಳಿಗೆ ಶೋಭೆ ತರುವಂತದಲ್ಲ.
ಇಲ್ಲಿಯ ಪಂಚಾಯತ್ ಅಧ್ಯಕ್ಷರ ಮಾತಿಗೂ ಬೆಲೆ ನೀಡದ ಅಧಿಕಾರಿಗಳ ಮೇಲೆ ಗ್ರಾಮ ಪಂಚಾಯತ್ ಕಾನೂನು ಕ್ರಮ ಕೈಗೊಳ್ಳಬೇಕು.
ಹಲವು ವರ್ಷಗಳಿಂದ ಇದ್ದ ಭಗವಧ್ವಜದ ಕಟ್ಟೆಯನ್ನು ತೆರವುಗೊಳಿಸಿದ್ದು ಹಿಂದೂಗಳ ಧಾರ್ಮಿಕ ನಂಬಿಕೆ ಮೇಲಿನ ದಾಳಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪದೇಪದೇ ಈ ರೀತಿಯ ಘಟನೆ ನಡೆಯುತ್ತಿದ್ದು, ರಾಜಕೀಯ ಲಾಭಕ್ಕಾಗಿ ಹಿಂದೂ ಸಮಾಜವನ್ನು ಕೆಣಕುವ ಪ್ರಯತ್ನ ಮಾಡುತ್ತಿದೆ.
ಈ ರೀತಿಯ ದ್ವೇಷದ ರಾಜಕಾರಣಕ್ಕೆ ಮುಂದಿನ ದಿವಸದಲ್ಲಿ ಹಿಂದೂ ಸಮಾಜ ಉತ್ತರ ನೀಡಲು ಸಿದ್ದವಾಗಿದೆ ಎಂದು ಅರುಣ್ ಕುಮಾರ್ ಪುತ್ತಿಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























