ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಸಭಾಭವನ, ಅಯ್ಯಪ್ಪಗುಡಿ, ನಾಗನಗುಡಿ ಹಾಗೂ ನವಗ್ರಹ ಗುಡಿಗಳ ತೆರವುಗೊಳಿಸುವ ಸಂಬಂಧ ಡಿ.29ರಂದು ಬೆಳಿಗ್ಗೆ ಧನುಪೂಜೆ ನಡೆದ ಬಳಿಕ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.
ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಶ್ರೀ ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಈ ಸಂದರ್ಭ ತಂತ್ರಿ ಕುಂಟಾರು 6 ಗುರುತಂತ್ರಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ಅಯ್ಯಪ್ಪ ಭಕ್ತವೃಂದದ ಮಾಧವ ಸ್ವಾಮಿ ಉಪಸ್ಥಿತರಿದ್ದರು.
ಬೆಳಿಗ್ಗೆ ಗಣಪತಿ ಗುಡಿಯ ಎದುರು 108 ಕಾಯಿ ಗಣಪತಿ ಹವನ, ಶತರುದ್ರಾಭಿಷೇಕ, ವಿಷ್ಣು ಸಹಸ್ರನಾಮ ಹವನ, ದೇವಳದ ಸಭಾಭವನದಲ್ಲಿ ಚಕ್ರಾಜ್ಞಪೂಜೆ, ದ್ವಾದಶಮೂರ್ತಿ ಆರಾಧನೆ, ಸುಹಾಸಿನಿ ಆರಾಧನೆ ಸಾಯಂಕಾಲ ವನದುರ್ಗಾಹವನ, ಅಘೋರ ಹವನ ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ವಿನಯ ಸುವರ್ಣ, ಮಹಾಬಲ ರೈ ವಳತ್ತಡ್ಕ, ಈಶ್ವರ ಬೆಡೇಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ದಿನೇಶ್ ಪಿ ಈ ವಿ, ನಳಿನಿ ಪಿ ಶೆಟ್ಟಿ, ಕೃಷ್ಣವೇಣಿ, ಪ್ರಧಾನ ಅರ್ಚಕರೂ ಮತ್ತು ಸದಸ್ಯರಾದ ವೇ ಮೂ ವಸಂತ ಕೆದಿಲಾಯ, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಸಹಿತ ಭಕ್ತರು ಉಪಸ್ಥಿತರಿದ್ದರು.


























