ಸುಳ್ಯ: ಕೊಯನಾಡು ಬಳಿ ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಪಲ್ಟಿಯಾಗಿ ವಾಹನದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.
ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರು ಕೊಯನಾಡು ಮೇಲಿನ ಪೋಸ್ಟ್ ಆಫೀಸ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಪರಿಣಾಮವಾಗಿ ವಾಹನದಲ್ಲಿದ್ದವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಆಂಬು ಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ.



























