ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಚಿವ ದಿನೇಶ್ ಗುಂಡೂರಾವ್ ಸ್ವಾಗತ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿ ಅಳವಡಿಸಿದ್ದ ಬ್ಯಾನರ್ ಹೊತ್ತಿ ಉರಿದಿರುವಂತಹ ಘಟನೆ ನಗರದ ಚಿಕ್ಕಪೇಟೆಯಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳು ಕೂಡಲೇ ಬೆಂಕಿ ನಂದಿಸಿದ್ದು, ಅದೃಷ್ಟಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಸಂಕ್ರಾಂತಿ ಹಬ್ಬದ ಹಿನ್ನೆಲೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಆಗಮಿಸಿದ್ದರು. ಸ್ಥಳೀಯರು ಪಟಾಕಿ ಹಚ್ಚುವ ಮೂಲಕ ಸ್ವಾಗತ ಕೋರಿದ್ದಾರೆ. ಈ ವೇಳೆ ಪಟಾಕಿ ಕಿಡಿ ಬ್ಯಾನರ್ಗೆ ತಗುಲಿ ಹೊತ್ತಿ ಉರಿದಿದೆ.


























