ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 24-01-2026 ರಂದು ಕುಟುಂಬ ಕಲಹದ ಹಿನ್ನೆಲೆಯಲ್ಲಿ ದಾರುಣ ಘಟನೆ ಸಂಭವಿಸಿದೆ. ಮೂಕ್ಷ ಎಂಬ ಯುವಕನು ತನ್ನ ಮನೆಯೊಳಗೆ ತನ್ನ ತಂದೆ ವಸಂತ್ ಅಮೀನ್ ಅವರ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ.
ಗಾಯಗೊಂಡ ವಸಂತ್ ಅಮೀನ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ನಂತರ ಆರೋಪಿ ಮೂಕ್ಷನು ತನ್ನ ತಂದೆಯ ಹೆಸರಿನಲ್ಲಿ ಪರವಾನಗಿ ಹೊಂದಿರುವ SBBL ಬಂದೂಕಿನಿಂದ ತನ್ನ ಮುಖಕ್ಕೆ ಗುಂಡು ಹಾರಿಸಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಘಟನೆ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದು ಪ್ರಾಥಮಿಕ ಮಾಹಿತಿ ಆಗಿರುತ್ತದೆ. ಮುಂದಿನ ತನಿಖೆಯ ನಂತರ ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

























