ಮುಂಬೈ, ಜನವರಿ 28: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಅಜಿತ್ ಪವಾರ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು, ಆದರೆ ಅವರ ಜೀವವನ್ನು ಉಳಿಸಲಾಗಲಿಲ್ಲ. ವಿಮಾನದಲ್ಲಿ ಐದು ಜನರಿದ್ದರು, ಅವರಲ್ಲಿ ಯಾರನ್ನೂ ಉಳಿಸಲು ಸಾಧ್ಯವಾಗಲಿಲ್ಲ. ಅಜಿತ್ ಪವಾರ್ ಅವರ ಪಿಎಸ್ಒ ಸೇರಿದಂತೆ ಇಬ್ಬರು ಸಿಬ್ಬಂದಿ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಆರಂಭಿಕ ವರದಿಗಳ ಪ್ರಕಾರ, ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡು ಕ್ರ್ಯಾಶ್ ಲ್ಯಾಂಡಿಂಗ್ ಮಾಡಬೇಕಾಯಿತು. ಅಪಘಾತದಲ್ಲಿ ಅಜಿತ್ ಪವಾರ್ ಪ್ರಸ್ತುತ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಿಲ್ಲಾ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಇಂದು ಬುಧವಾರ ಬಾರಾಮತಿಯಲ್ಲಿ ಅಜಿತ್ ಪವಾರ್ ಅವರ ಹಲವಾರು ಸಭೆಗಳನ್ನು ನಿಗದಿಪಡಿಸಲಾಗಿತ್ತು ಅಲ್ಲಿಗೆ ಹೋಗುತ್ತಿದ್ದರು ಎನ್ನಲಾಗಿದೆ.

























