ಬಂಟ್ವಾಳ: ದಿನಾಂಕ 02.02.2026 ರಂದು ರಾತ್ರಿ ಸುಮಾರು 7.30 ಗಂಟೆಗೆ ಪಿರ್ಯಾದಿದಾರರು ತಮ್ಮ ಮನೆಯ ಕೋಣೆಯಲ್ಲಿ ಇದ್ದ ಸಂದರ್ಭದಲ್ಲಿ, ಅವರ ಮಾವ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.
ಘಟನೆ ನಂತರ ಪಿರ್ಯಾದಿದಾರರು ತಪ್ಪಿಸಿಕೊಂಡು ಹೊರಗೆ ಬಂದಾಗ, ಗಂಡನು ಸಹ ತಂದೆಯ ಪರವಾಗಿ ವರ್ತಿಸಿ ಚಿಕಿತ್ಸೆ ಕೊಡಿಸಲು ನಿರಾಕರಿಸಿದ್ದಾನೆ ಎನ್ನಲಾಗಿದೆ. ಬಳಿಕ ಪಿರ್ಯಾದಿದಾರರ ತಂದೆ–ತಾಯಿ ಅವರನ್ನು ಸಂಪಾಜೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂಬಂಧ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ZERO FIR ಸಂಖ್ಯೆ 01/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 85, 74, 115(2), 117(2), 351(2) ಹಾಗೂ 3(5) ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಘಟನಾ ಸ್ಥಳದ ವ್ಯಾಪ್ತಿಯನ್ನು ಪರಿಗಣಿಸಿ ಪ್ರಕರಣವನ್ನು ಸುಳ್ಯ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

























