ಬೆಂಗಳೂರು: “ರಾಜ್ಯದಲ್ಲಿ ಉಲ್ಬಣವಾಗುತ್ತಿರುವ ಬ್ಲ್ಯಾಕ್ ಫಂಗಸ್ ಸೋಂಕು ನಿರ್ವಹಣೆಗೆ ಇಂದು ಹೆಚ್ಚುವರಿಯಾಗಿ 5,240 ವಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಒದಗಿಸಲಾಗಿದೆ” ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಂದು ಹೆಚ್ಚುವರಿಯಾಗಿ 61,120 ವಯಲ್ಸ್ ಲಿಪೊಸೊಮಾಲ್ ಎಂಫೋಟೆರಿಸಿನ್-ಬಿ ಹಂಚಿಕೆ ಮಾಡಿದ್ದೇವೆ. ಕರ್ನಾಟಕಕ್ಕೆ 5,240 ವಯಲ್ಸ್ ಒದಗಿಸಲಾಗಿದೆ. ದೇಶಾದ್ಯಂತ ಇದುವರೆಗೆ 7.9 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದ್ದು ರಾಜ್ಯಕ್ಕೆ 61,120 ವಯಲ್ಸ್ ದೊರೆತಿದೆ” ಎಂದು ತಿಳಿಸಿದ್ದಾರೆ.
“ಕರ್ನಾಟಕಕ್ಕೆ ಮತ್ತೆ 9,750 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ. ರಾಜ್ಯಗಳು ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳಿಗೆ ಇಂದು ಹೆಚ್ಚುವರಿಯಾಗಿ 61,120 ವಯಲ್ಸ್ ಆಂಫೊಟೆರಿಸಿನ್-ಬಿ ಔಷಧಿಗಳನ್ನು ಹಂಚಿಕೆ ಮಾಡಿದ್ದೇವೆ. ಈವರೆಗೆ ದೇಶಾದ್ಯಂತ 7.9 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.