ಪುತ್ತೂರು ನಿವಾಸಿ, ಶ್ರೀಕೃಷ್ಣ ರಾವ್ ಎಂಬಾತ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಸಂತ್ರಸ್ತೆಗೆ ಬೆಂಬಲವಾಗಿದ್ದ ಪ್ರತಿಭಾ ಕುಳಾಯಿಗೆ ಠಾಣೆಗೆ ಹಾಜರಾಗಲು ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
ಆರೋಪಿ ಶ್ರೀಕೃಷ್ಣ ರಾವ್ ಎಂಬಾತನ ತಂದೆ ಪಿ.ಜಿ. ಜಗನ್ನಿವಾಸ ರಾವ್ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನೀಡಿದ ದೂರಿನ ಮೇರೆಗೆ, ಅರ್ಜಿಯನ್ನು ಅಧೀಕ್ಷರು ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಹೀಗಾಗಿ, ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ’ ಎಂದು ತಿಳಿದು ಬಂದಿದೆ.

























