ಪುತ್ತೂರು: ಪುತ್ತೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಏಕಾಏಕಿ ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥಗೊಂಡ ಪ್ರಯಾಣಿಕರು ಬಸ್ನಲ್ಲೇ ಕೆಳಗೆ ಬಿದ್ದಿದ್ದು, ಗಾಯಗೊಂಡಿದ್ದಾರೆ ಎನ್ನಲಾಗಿದೆ. ಘಟನೆ ಗಮನಿಸಿದ ಬಸ್ ಚಾಲಕ ತಕ್ಷಣ ಸ್ಪಂದಿಸಿ, ಅದೇ ಬಸ್ನಲ್ಲಿ ಗಾಯಾಳು ಪ್ರಯಾಣಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ.


























