ಬೆಳ್ತಂಗಡಿ :ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ , ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಶ್ರಯದಲ್ಲಿ ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಸಹಯೋಗದಲ್ಲಿ ಹಾಗೂ ವೇಣೂರು, ಅಳದಂಗಡಿ, ನಾರಾವಿ, ಸುಲ್ಕೆರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನೇತೃತ್ವದಲ್ಲಿ ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಉದ್ಯೋಗ ನೈಪುಣ್ಯ ತರಬೇತಿ ಶಿಬಿರ” ಉದ್ಘಾಟನಾ ಕಾರ್ಯಕ್ರಮವು ನಡೆಯಿತು.
. ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮದ ಮುಖ್ಯ ಕೇಂದ್ರಬಿಂದುವಾಗಿದ್ದು, ಕಾರ್ಯಕ್ರಮದ ಯೋಜನೆಯ ಕುರಿತಂತೆ ಮೆಚ್ಚುಗೆಯ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು.