ಪುತ್ತೂರು: ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಮಾ.01 ರಂದು ಪುತ್ತೂರು ಐಬಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರು ಹಾಗೂ ತನ್ನ ಆತ್ಮೀಯರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಮಾಡುವಂತೆ ಆಗ್ರಹಿಸಿ ದಿನಾಂಕ 03-03-2026ರಂದು ನಡೆಯಲಿರುವ ಸಾoಕೇತಿಕ ಪ್ರತಿಭಟನೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು. ಈ ಟೋಲ್ ಗೇಟ್ ಅವೈಜ್ಞಾನಿಕವಾಗಿದ್ದು, ಜನತೆಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಅವರು, ಟೋಲ್ ಗೇಟ್ ಸಂಪೂರ್ಣ ಮುಚ್ಚುವ ತನಕ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು.
“ಮೊದಲ ಹಂತದಲ್ಲಿ ಸಾoಕೇತಿಕ ಪ್ರತಿಭಟನೆ ನಡೆಯಲಿದೆ. ನಂತರದ ಹಂತದಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುತ್ತದೆ. ಈ ಹೋರಾಟಕ್ಕೆ ಪುತ್ತೂರು ತಾಲೂಕಿನ ಎಲ್ಲಾ ಜನರು ಸಹಕಾರ ನೀಡಬೇಕು,” ಎಂದು ಅವರು ಮನವಿ ಮಾಡಿದರು.
ಇದೇ ವೇಳೆ, ಮಾರ್ಚ್ 07-03-2026ರಂದು ನಡೆಯಲಿರುವ ಬಂಟ್ವಾಳ ಕಂಬಳಕ್ಕೆ ಆಗಮಿಸುವಂತೆ ಸಾರ್ವಜನಿಕರಿಗೆ ಆಹ್ವಾನ ನೀಡಿದರು. ಈ ಕಂಬಳ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ಹೇಮನಾಥ ಶೆಟ್ಟಿ ಕಾವು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.


























