ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜು (42) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂಲತಃ ಮೈಸೂರಿನ ಕೆ.ಆರ್.ನಗರ ನಿವಾಸಿಯಾಗಿದ್ದ ಮಂಜು ಅವರು ಕಳೆದ ಎರಡು ವರ್ಷಗಳಿಂದ ಸುಳ್ಯ ಡಿಗ್ರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಸಹ ಕಾಲೇಜಿಗೆ ಹಾಜರಾಗಿದ್ದರು. ಮಧ್ಯಾಹ್ನ ವೇಳೆ ಆಸ್ಪತ್ರೆಗೆ ತೆರಳುವುದಾಗಿ ಸಹೋದ್ಯೋಗಿಗಳಿಗೆ ತಿಳಿಸಿ, ವಿದ್ಯಾರ್ಥಿಯೊಬ್ಬರ ಬೈಕ್‌ನಲ್ಲಿ ಸುಳ್ಯ ಪಟ್ಟಣಕ್ಕೆ ಬಂದು ತಮ್ಮ ಬಾಡಿಗೆ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು.
ನಂತರ ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಮನೆಯಿಂದ ಮೆಡಿಕಲ್ ಕಡೆಗೆ ತೆರಳುತ್ತಿದ್ದಾಗ ದಾರಿಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದೊಯ್ದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


























