ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಅಂಗಡಿಗೆ ನುಗ್ಗಿದ ಘಟನೆ ಗುರುಪುರ ದಲ್ಲಿ ನಡೆದಿದೆ.
ಘಟನೆ ಪರಿಣಾಮ ಅಂಗಡಿ ಸಂಪೂರ್ಣ ಹಾನಿಯಾಗಿದ್ದು, ವಿದ್ಯುತ್ ಮತ್ತು ಕೇಬಲ್ ತಂತಿಗಳು ಮುರಿದು ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
























