ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವ ರೀತಿಯ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಬೆಳ್ತಂಗಡಿ ತಾಲೂಕಿನ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ, 2025ರಲ್ಲಿ ಮಂಗಳೂರು ನಗರದ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ವಿಷಯಗಳನ್ನು ಹಂಚಿಕೊಂಡಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 353(1), 353(2), 61(2) ಹಾಗೂ 55 ಅಡಿಯಲ್ಲಿ ದಾಖಲಿಸಲಾಗಿದೆ.
ತನಿಖೆ ವೇಳೆ, ಆರೋಪಿತೆಯು “Terrorism has religion and so called Terrorists too. Its Islam” ಸೇರಿದಂತೆ ಕೋಮು ಭಾವನೆಗಳನ್ನು ಕೆರಳಿಸುವಂತಹ ಹಲವು ಪೋಸ್ಟ್‌ಗಳನ್ನು ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ.
ಇದನ್ನಾಧರಿಸಿ, ಪೊಲೀಸರು ಮಾರ್ಚ್ 19, 2026ರಂದು ಆರೋಪಿತೆಯನ್ನು ಬಂಧಿಸಿ, ಆಕೆ ಬಳಸಿದ್ದ ಮೊಬೈಲ್ ಹಾಗೂ ಸಂಬಂಧಿತ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.



























