ಮಂಗಳೂರು, ಮಾರ್ಚ್ 24:
17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿತನನ್ನು ಬರ್ಕೆ ಪೊಲೀಸ್ ಠಾಣಾ ಸಿಬ್ಬಂದಿ ಬಂಧಿಸಿದ್ದಾರೆ.
ಬರ್ಕೆ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ 15/2009ರಡಿ, ಕಾಪಿರೈಟ್ ಕಾಯ್ದೆಯ ಕಲಂ 52(a) ಮತ್ತು 63ರ ಪ್ರಕಾರ ದಾಖಲಾಗಿದ್ದ ಪ್ರಕರಣದಲ್ಲಿ ರಿಯಾಜ್ (ವಾಸ: ನಾಟೇಕಲ್, ದೇರಳಕಟ್ಟೆ, ಮಂಗಳೂರು) ಎಂಬಾತ ಆರೋಪಿಯಾಗಿದ್ದನು. ಪ್ರಕರಣ ದಾಖಲಾದ ನಂತರದಿಂದಲೇ ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.
ಈ ಹಿನ್ನೆಲೆಯಲ್ಲಿ, 2016ರಲ್ಲಿ ಮಾನ್ಯ ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿ ಸಿ 79/2016 ಎಂದು ಪರಿವರ್ತಿಸಿತ್ತು.
ಸುಮಾರು 17 ವರ್ಷಗಳಿಂದ ಪರಾರಿಯಾಗಿದ್ದ ಆರೋಪಿತನನ್ನು ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾರ್ಚ್ 24, 2026 ರಂದು ಪತ್ತೆಹಚ್ಚಿ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ನಂತರ ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.


























