ಬಂಟ್ವಾಳ: ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ ಸಂಖ್ಯೆ 152/2017, ಕಲಂ 379 r/w 34 IPC ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇರಳದ ಪಲಕ್ಕಾಡ್ ನಿವಾಸಿ ಶಕೀಲ್ ಪಿ (43) ಎಂಬಾತನು ದೀರ್ಘಕಾಲದಿಂದ ವಾರೆಂಟ್ ಆರೋಪಿಯಾಗಿ ತಲೆಮರೆಸಿಕೊಂಡಿದ್ದನು.
ಪೊಲೀಸರು ಸಂಗ್ರಹಿಸಿದ ಖಚಿತ ಮಾಹಿತಿಯ ಮೇರೆಗೆ, ದಿನಾಂಕ 27-03-2026 ರಂದು ಕೇರಳದ ತಿರೂರ್ನಲ್ಲಿ ಆರೋಪಿಯನ್ನು ಬಂಧಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ಸಂತೋಷ್ (HC-314) ಮತ್ತು ಪೊಲೀಸ್ ಕಾನ್ಸ್ಟೇಬಲ್ ಶಿವಾನಂದ ಮಡ್ಡಿ (PC-2462) ಭಾಗವಹಿಸಿದ್ದರು.
ಬಂಧಿತ ಆರೋಪಿಯನ್ನು ಅದೇ ದಿನ ಬಂಟ್ವಾಳದ ಮಾನ್ಯ ACJ & JMFC ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.



























