ಬಂಟ್ವಾಳ : ಮೇ 08ರಿಂದ ಮೇ 10ರವರೆಗೆ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಲೋಕಾರ್ಪಣೆ ಹಾಗೂ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪ್ರತಿಷ್ಠಾ ಸಾನ್ನಿಧ್ಯ ಕಳಶಾಭಿಷೇಕ ಕಾರ್ಯಕ್ರಮದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಮಂದಿರದ ವಠಾರದಲ್ಲಿ ನೆರವೇರಿತು.
ಆಮಂತ್ರಣ ಪತ್ರಿಕೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂತಹ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದ ಏಕತೆ ಹಾಗೂ ಸೌಹಾರ್ದತೆಯನ್ನು ಬಲಪಡಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಗೌರವಾಧ್ಯಕ್ಷರಾದ ಎ. ರುಕ್ಕಯ ಪೂಜಾರಿ ಏಳ್ತಿಮಾರು, ಅಧ್ಯಕ್ಷರಾದ ನಾರಾಯಣ ಪೂಜಾರಿ ನಿಡ್ಯ, ಕಾರ್ಯದರ್ಶಿ ಮೋಹನ್ ಪಿ.ಎಸ್. ಸೇರಿದಂತೆ ಟ್ರಸ್ಟಿಗಳಾದ ಡೀಕಯ್ಯ ಪೂಜಾರಿ ಕಟ್ಟದಮೂಡು, ಜಯರಾಮ ಕಲ್ಲಪಾಪು, ಶರತ್ ಸೇನೆರೆಕೋಡಿ ಹಾಗೂ ಇತರರು ಉಪಸ್ಥಿತರಿದ್ದರು.
ಮೇ 08ರಿಂದ 10ರವರೆಗೆ ನಡೆಯಲಿರುವ ಮುಖ್ಯ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಶೀರ್ವಾದ ಪಡೆಯುವಂತೆ ಆಯೋಜಕರು ಮನವಿ ಮಾಡಿದ್ದಾರೆ.



























