ಪುತ್ತೂರು: ರಿಕ್ಷಾವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಕೂರ್ನಡ್ಕ ಎಂಬಲ್ಲಿ ನಡೆದಿದೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾ ಚಾಲಕ ಬೈಕ್, ಆಕ್ಟಿವಾ ಮತ್ತು ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ. ರಿಕ್ಷಾ ಚಾಲಕ ಅಮಲು ಪದಾರ್ಥ ಸೇವಿಸಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.


























