ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ “ವಾತ್ಸಲ್ಯಮಯಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ–ವಿಟ್ಲ ವ್ಯಾಪ್ತಿಯ ಸುಮಾರು 147 ಮಂದಿ ಮಾಶಾಸನ ಪಡೆಯುತ್ತಿರುವ ವಾತ್ಸಲ್ಯ ಫಲಾನುಭವಿಗಳಿಗೆ ಹಣ್ಣುಹಂಪಲುಗಳನ್ನು ವಿತರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ದ.ಕ-2 ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ ಅವರು ಫಲಾನುಭವಿಗಳಿಗೆ ಹಣ್ಣುಹಂಪಲುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಸುಮಾರು 19,167 ಮಂದಿ ವಾತ್ಸಲ್ಯ ಫಲಾನುಭವಿಗಳಿಗೆ ಹಣ್ಣುಹಂಪಲು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಜೊತೆಗೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಸ್ವಚ್ಛತಾ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿಟ್ಲ ಯೋಜನಾಕಚೇರಿಯ ಯೋಜನಾಧಿಕಾರಿಯಾದ ಸುರೇಶ್ ಗೌಡ ಎಸ್., ಜ್ಞಾನ ವಿಕಾಸ ಸಮನ್ವಯಾಧಿಕಾರಿಯಾದ ಶ್ರೀಮತಿ ದೀಪಾ, ಹಾಗೂ ಸೇವಾ ಪ್ರತಿನಿಧಿಯಾದ ಬಿಂದು ಉಪಸ್ಥಿತರಿದ್ದರು.
ಕಾರ್ಯಕ್ರಮವು ಸಮಾಜಮುಖಿ ಕಾರ್ಯಗಳ ಮೂಲಕ ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿ ನಡೆಯಿತು.



























