ಪುತ್ತೂರು: ತುರ್ತು ಮತ್ತು ನಿರ್ವಹಣಾ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಪೀಡರ್ನಲ್ಲಿ ಎ. 4ರಂದು ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ ಈ ಪೀಡರ್ನಿಂದ ವಿದ್ಯುತ್ ಸರಬರಾಜಾಗುವ ಕೋರ್ಟ್ ರೋಡ್, ಮಿನಿ ವಿಧಾನಸೌಧ, ಚೇತನಾ ಹಾಸ್ಪಿಟಲ್, ಪರ್ಲಡ್ಕ, ಬೈಪಾಸ್, ಗೋಳಿಕಟ್ಟೆ, ಕುಂಜೂರು ದೇವಸ್ಥಾನ, ತೆಂಕಿಲ, ಬಪ್ಪಳಿಗೆ, ಬಾಲವನ, ಉರ್ಲಾಂಡಿ, ಸರಕಾರಿ ಆಸ್ಪತ್ರೆ, ಕರ್ಮಲಮತ್ತು ಬೊಳುವಾರು ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.




























