ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಾರ್ಚ್ 30, 2026ರಂದು ನಡೆದ ಈ ಕಳವು ಪ್ರಕರಣದ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 45/2026ರಂತೆ BNS-2023ರ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ತನಿಖೆಯ ವೇಳೆ ಏಪ್ರಿಲ್ 6, 2026ರಂದು ಸುಳ್ಯ ತಾಲೂಕಿನ ಕೆಮ್ರಾಜೆ ಎಲಿಮಲೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಆಂಧ್ರ ಪ್ರದೇಶದ ಪಶ್ಚಿಮ ಗೊದಾವರಿ ಜಿಲ್ಲೆಯ ನಿವಾಸಿಯಾದ ಮಹಮ್ಮದ್ ಸಲ್ಮಾನ್ (35) ಎಂದು ಗುರುತಿಸಲಾಗಿದೆ.
ಆರೋಪಿತನಿಂದ ಕಳವು ಮಾಡಲಾಗಿದ್ದ ರೂ. 2000 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಪ್ರಕರಣದ ತನಿಖೆಯನ್ನು ಸುಳ್ಯ ಪೊಲೀಸರು ಮುಂದುವರಿಸಿದ್ದಾರೆ.




























