ಬೆಳ್ತಂಗಡಿ : ಜುಲೈ.5 ರಿಂದ ರಾಜ್ಯಾದ್ಯಂತ ದೇಗುಲಗಳು ಓಪನ್ ಹಿನ್ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ಈ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ಅನ್ನ ಛತ್ರ, ವಸ್ತು ಸಂಗ್ರಹಾಲಯದಲ್ಲಿ ದೇವದ ಸಿಬ್ಬಂದಿಗಳ ಸ್ಯಾನಿಟೈಸ್ ಮಾಡುತ್ತಿದ್ದಾರೆ.
ನಾಳೆಯಿಂದ ದೇವಾಲಯಗಳು ಓಪನ್ ಆಗಲಿದ್ದು, ಈ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚಿರುವ ಸಾಧ್ಯತೆ ಇದೆ. ದೇವಳದ ಆಡಳಿತ ಮಂಡಳಿ, ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದೆ.